alex Certify BREAKING : ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ, ಓರ್ವ ಸಜೀವ ದಹನ .! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ, ಓರ್ವ ಸಜೀವ ದಹನ .!

ಬೆಂಗಳೂರು : ಬೆಂಗಳೂರಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ.ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ಸತೀಶ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಪರಿಣಾಮ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ.

.ನಾಲ್ವರು ಪ್ರಾಣಾಪಯದಿಂದ ಪಾರಾಗಿದ್ದಾರೆ. ಕಟ್ಟಡದಲ್ಲಿ ಒಟ್ಟು 6 ಮಂದಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...