ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್ ಎಸ್ಐಟಿ ತನಿಖೆಗೆ ಹಾಜರಾಗಿದ್ದಾರೆ.
ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಮೊಹಮ್ಮದ್ ನಲಪಾಡ್ ಗೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೊಹಮ್ಮದ್ ನಲಪಾಡ್ ವಿಚಾರಣೆಗೆ ಹಾಜರಾಗಿದ್ದಾರೆ.
ಎಸ್ ಐಟಿ ತನಿಖಾಧಿಕಾರಿ ಡಿವೈ ಎಸ್ ಪಿ ಬಾಲರಾಜ್ ಅವರ ಮುಂದೆ ನಲಪಾಡ್ ವಿಚಾರಣೆಗೆ ಹಾಜರಾಗಿದ್ದಾರೆ.