ಬೆಂಗಳೂರು: ನಟ ಕಿಚ್ಚ ಸುದೀಪ್ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದಿಢೀರ್ ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸುದೀಪ್ ಭೇಟಿ ಸೌಜನ್ಯಯುತ ಭೇಟಿ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಟ ಸುದೀಪ್ ಅವರದ್ದು ಸೌಜನ್ಯಯುತ ಭೇಟಿ. ಚಿತ್ರೀಕರಣದ ಜಾಗದ ವಿಚಾರವಾಗಿ ಮಾತನಾಡಲು ಬಂದಿದ್ದರು. ಚಿತ್ರೀಕರಣಕ್ಕೆ ತೊಂದರೆಯಾದ ಕಾರಣಕ್ಕೆ ಬಂದಿದ್ದರು. ಸಂಬಂಧಪಟ್ಟವರಿಗೆ ತಿಳಿಸುತ್ತೇನೆ ಎಂದು ಹೇಳಿದ್ದೇನೆ ಎಂದರು.
ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಅವರು ಒಬ್ಬ ಗೆಳೆಯರಾಗಿ ಬಂದು ಭೇಟಿಯಾಗಿದ್ದಾರೆ ಅಷ್ಟೇ. ಇದರಲ್ಲಿ ರಾಜಕೀಯವೇನೂ ಇಲ್ಲ ಎಂದು ತಿಳಿಸಿದರು.