ಬೆಂಗಳೂರು: ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೃಷ್ಣ ಶಟ್ಟಿ ಅವರಿಗೆ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ಪ್ರಕಟಿಸಿದೆ.
ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವವರು ಆರೋಪಿಗಳು ತಪ್ಪಿತಸ್ಥರು ಎಂದು ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಕೋರ್ಟ್ ಬೆಳಿಗ್ಗೆ ತೀರ್ಪು ನೀಡಿತ್ತು. ಇದೀಗ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದ್ದು, ಕೃಷ್ಣಯ್ಯ ಶಿಟ್ಟಿಗೆ 3 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ.
ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ದಿ, ಮುನಿರಾಜು, ಶ್ರೀನಿವಾಸ್ ಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ತಲಾ 1 ಲಕ್ಷ ರುಪಾಯಿ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
2012ರಲ್ಲಿ ಖಾಸಗಿ ಬ್ಯಾಂಕ್ ಗೆ ಕೃಷ್ಣಯ್ಯ ಶೆಟ್ಟಿ ಹಾಗೂ ಗ್ಯಾಂಗ್ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿತ್ತು. ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣ ಇದಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.