ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಚಿರತೆಯೊಂದು ಹಠಾತ್ತನೆ ಗ್ರಾಮಕ್ಕೆ ನುಗ್ಗಿ ಗ್ರಾಮಸ್ಥರ ಮೇಲೆ ದಾಳಿ ನಡೆಸಿದ್ದರಿಂದ ಆರು ಮಂದಿ ಗಾಯಗೊಂಡಿದ್ದಾರೆ. ಐಎಎನ್‌ಎಸ್ ಸುದ್ದಿ ಸಂಸ್ಥೆಯ ಪ್ರಕಾರ, ಕತರ್ನಿಯಾಘಾಟ್ ವನ್ಯಜೀವಿ ವಿಭಾಗದ ಸುಜೌಲಿ ಕರಿಕೋಟ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಚಿರತೆ ಗ್ರಾಮವನ್ನು ಪ್ರವೇಶಿಸಿ, ಹಲವಾರು ನಿವಾಸಿಗಳ ಮೇಲೆ ದಾಳಿ ಮಾಡಿದೆ. ಆರು ಜನರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಭಯಾನಕ ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಜೋರಾಗಿ ಶಬ್ದ ಮಾಡುವ ಮೂಲಕ ಗ್ರಾಮಸ್ಥರು ಚಿರತೆಯನ್ನು ಕಾಡಿಗೆ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಹೆಚ್ಚಿನ ದಾಳಿಗಳನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ಚಿರತೆ ದಾಳಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಎತ್ತಿ ತೋರಿಸುತ್ತಿದೆ.
Uttar Pradesh: Leopard attacks villagers in Bahraich, Injures Several
A leopard entered a village in Bahraich’s Sujauli Karikot area under the Katarniaghat Wildlife Division, attacking and injuring at least six people. Panic spread among locals as the ferocious animal went on a… pic.twitter.com/hOySItwkR7
— IANS (@ians_india) February 6, 2025