ಬ್ಯಾಂಕ್ ವಂಚನೆ ಕೇಸ್ ನಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲುಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
ಎನ್ ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಭ್ರಷ್ಟಾಚಾರ ನಿವಾರಣಾ ಕಾಯ್ದೆ-1988ರ ಕಲಂ 120 ಬಿ, 420, 467 ಮತ್ತು 471ರ ಅಡಿಯಲ್ಲಿ ಈ ಶಿಕ್ಷೆ ಪ್ರಕಟಿಸಲಾಗಿದ್ದು, ಕೃಷ್ಣಯ್ಯ ಶೆಟ್ಟಿ ಅವರಿಗೆ ₹5.25 ಲಕ್ಷ ಹಾಗೂ ಮೊದಲನೇ ಆರೋಪಿ ಎಂಟಿವಿ ರೆಡ್ಡಿ ಅವರಿಗೆ ₹7.75 ಲಕ್ಷ ದಂಡ ವಿಧಿಸಲಾಗಿದೆ.
ಇದೇ ವೇಳೆ ಕೃಷ್ಣಯ್ಯ ಶೆಟ್ಟಿ ಪರ ವಕೀಲ ನಾಗೇಂದ್ರ ನಾಯಕ್ ಅವರ ಮನವಿಯ ಮೇರೆಗೆ ನ್ಯಾಯಾಧೀಶರು ಶಿಕ್ಷೆಯನ್ನು ಒಂದು ತಿಂಗಳ ಕಾಲ ಅಮಾನತಿನಲ್ಲಿ ಇರಿಸಿ ಆದೇಶಿಸಿದ್ದು, ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ನೀಡಿದ್ದಾರೆ. ₹5.25 ಲಕ್ಷ ಬಾಂಡ್ ಹಾಗೂ ಒಬ್ಬರ ಭದ್ರತೆ ಒದಗಿಸಲು ನಿರ್ದೇಶಿಸಿದ್ದಾರೆ.2008 ರಲ್ಲಿ ಎಸ್ ಬಿ ಎಂ ಬ್ಯಾಂಕ್ ದಾಖಲಿಸಿದ್ದ ವಂಚನೆ, ಪೋರ್ಜರಿ ಕೇಸ್ ನಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಶಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. 7.17 ಕೋಟಿ ಸಾಲ ಪಡೆಯಲು ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಗೆ ವಂಚನೆ ಎಸಗಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.