![](https://kannadadunia.com/wp-content/uploads/2024/08/siddaramaiah-highcourt.jpg)
ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದ್ದು, ಮುಡಾ ಪ್ರಕರಣದ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ.
ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್ನಲ್ಲಿ ಇಂದು ನಡೆದಿದೆ. ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು.
ಮುಡಾ ಹರಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ಸ್ನೇಹಮಯಿ ಕೃಷ್ಣ ಹಾಗೂ ಸಿಎಂ ಸಿದ್ದರಾಮಯ್ಯ ಇಬ್ಬರ ಪರ ವಕೀಲರ ವಾದ-ಪ್ರತಿವಾದವನ್ನು ಆಲಿಸಿತ್ತು.