ಅಹಮದಾಬಾದ್: ಹೆತ್ತ ತಂದೆಯೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿರುವ ಘೋರ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.
ಸಂತ್ರಸ್ತೆ ತನ್ನ ಸ್ಥಿತಿಯ ಬಗ್ಗೆ ವೈದ್ಯರ ಬಳಿ ಹೇಳಿಕೊಂಡಿದ್ದಾಳೆ. ಫೆ.5ರದು ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದ ಸಂತ್ರಸ್ತೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ. ಈ ವೇಳೆ ಘಟನೆಯ ಬಗ್ಗೆ ವೈದರ ಬಳಿ ಹೇಳಿಕೊಂಡಿರುವ ಬಾಲಕಿ ಕಣ್ಣಿರಿಟ್ಟಿದ್ದಾಳೆ.
ಆರೋಪಿಗೆ ಆರು ಮಕ್ಕಳಿದ್ದು, 14 ವರ್ಷದ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದ. ವಿಷಯ ಬಾಯ್ಬಿಡದಂತೆ ಬೆದರಿಕೆ ಹಾಕುತ್ತಿದ್ದ. ಪೊಲೀಸರ ಮಾಹಿತಿ ಪ್ರಕಾರ ಆರೋಪಿಯ ಪತ್ನಿ ಹತ್ತು ವರ್ಷಗಳ ಹಿಂದೆ ಸಾವನ್ನಪ್ಪಿದ್ದು, ಇದಾದ ಬಳಿಕ ಆತ ತನ್ನ ಮಗಳನ್ನೇ ಬಳಸಿಕೊಂಡಿದ್ದಾನೆ. ಸಂತ್ರಸ್ತೆಯ ದೂರಿನ ಮೇರೆಗೆ ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆಗೆ ವೈದ್ಯಕೀಯ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.