ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಶುಕ್ರವಾರ ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸೆಕ್ಟರ್ 18 ರ ಮಹಾ ಕುಂಭ ಮೇಳ ಕ್ಷೇತ್ರದ ಶಂಕರಾಚಾರ್ಯ ಮಾರ್ಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಘಟನೆಯ ನಂತರ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡರು. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಆನ್ ಲೈನ್ ನಲ್ಲಿ ಕಾಣಿಸಿಕೊಂಡ ದೃಶ್ಯಗಳಲ್ಲಿ, ದಟ್ಟವಾದ ಹೊಗೆ ಈ ಪ್ರದೇಶವನ್ನು ಆವರಿಸಿರುವುದನ್ನು ಕಾಣಬಹುದು.
ಮಹಾ ಕುಂಭ ಮೇಳದ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ 30 ಜನರು ಪ್ರಾಣ ಕಳೆದುಕೊಂಡು, 60 ಜನರು ಗಾಯಗೊಂಡ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ಜನವರಿ 29 ರಂದು ಮುಂಜಾನೆ 2 ಗಂಟೆ ಸುಮಾರಿಗೆ ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಅಮೃತ ಸ್ನಾನಕ್ಕಾಗಿ ತ್ರಿವೇಣಿ ಸಂಗಮದ ಘಾಟ್ಗಳಲ್ಲಿ ಭಾರಿ ಜನಸಂದಣಿ ಜಮಾಯಿಸಿದ್ದರಿಂದ ಕಾಲ್ತುಳಿತ ಸಂಭವಿಸಿದೆ.
#WATCH | Prayagraj | A fire breaks out in Sector 18, Shankaracharya Marg of Maha Kumbh Mela Kshetra. Fire tenders are at the spot. More detail awaited pic.twitter.com/G4hTeXyRd9
— ANI (@ANI) February 7, 2025