![](https://kannadadunia.com/wp-content/uploads/2023/11/BJP-MLA-Vijayendra.png)
ಬೆಂಗಳೂರು: ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಲು ನಿರಾಕರಿಸಿರುವ ಹೈಕೋರ್ಟ್, ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಹೈಕೋರ್ಟ್ ತೀರ್ಪಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಮುಡಾ ಕೇಸ್ ನಲ್ಲಿ ಹೈಕೋರ್ಟ್ ಸಿಎಂ ಸಿದ್ದರಾಮಯ್ಯನವರು ನಿರಪರಾಧಿ ಎಂದು ಹೇಳಿಲ್ಲ. ಸಿದ್ದರಾಮಯ್ಯರನ್ನು ಲೋಪಮುಕ್ತರನ್ನಾಗಿ ಮಾಡಿಲ್ಲ. ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡಲು ನಿರಾಕರಿಸಿದೆ. ಲೋಕಾಯುಕ್ತದಲ್ಲಿ ತನಿಖೆ ಮುಂದುವರೆಯುತ್ತಿದೆ ಎಂದು ಹೇಳಿದರು.
ಸಿಬಿಐ ತನಿಖೆಗೆ ಹೈಕೋರ್ಟ್ ನಿರಾಕರಣೆ ಹಾಗೂ ಸ್ನೇಹಮಯಿ ಕೃಷ್ಣ ಅರ್ಜಿ ವಜಾಗೊಳಿಸಿದ ಮಾತ್ರಕ್ಕೆ ಬಿಜೆಪಿ ಹೋರಾಟಕ್ಕೆ ಹಿನ್ನಡೆಯಾಗಿಲ್ಲ. ಮುಡಾ ಹಗರಣದ ವಿರುದ್ಧ ಬಿಜೆಪಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಿತ್ತು. ನಮ್ಮ ಹೋರಾಟದ ಫಲವಾಗಿಯೇ ಮುಡಾ ಹಗರಣ ಬೆಳಕಿಗೆ ಬಂದು ತನಿಖೆ ನಡೆಯುತ್ತಿದೆ. ನಮ್ಮ ಹೋರಾಟಕ್ಕೆ ಯಾವುದೇ ಹಿನ್ನಡೆಯಾಗಿಲ್ಲ. ಮುಡಾ ಕೇಸ್ ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ. ಮುಂದೆ ಏನಾಗಲಿದೆ ಎಂಬುದನ್ನು ನೋಡೋಣ ಎಂದು ಹೇಳಿದರು.