ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಿದ್ದೇವೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿರುವುದು ನಿಜ. ಸಿಎಂ ಸಿದ್ದರಾಮಯ್ಯ ವಿರುದ್ಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಿದ್ದೇವೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಇದರಿಂದ ವಿಚಲಿತನಾಗುವ ಹಾಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮ ಹೋರಾಟ ಮುಂದುವರೆಸುತ್ತೇವೆ. ಮುಂದಿನ ವಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಲಾಗುತ್ತದೆ. ಹಾಗೂ ಈ ಪ್ರಕರಣವನ್ನು ಸಿಬಿಐಗೆ ಕೊಡಿಸುವ ಪ್ರಯತ್ನದ ಹೋರಾಟ ಮುಂದುವರೆಸಿಕೊಂಡು ಹೋಗುತ್ತೇವೆ. ಮುಂದಿನ ವಾರದಲ್ಲಿ ನಾವು ಸುಪ್ರೀಂಗೆ ಅರ್ಜಿ ಸಲ್ಲಿಸುತ್ತೇವೆ. ಇಲ್ಲಿ ನಾವು ಕಾಯುವ ಪ್ರಶ್ನೆಯೇ ಬರುವುದಿಲ್ಲ. ತನಿಖಾ ಸಂಸ್ಥೆಯ ವರದಿಯ ಆಧಾರದ ಮೇಲೆ ತೀರ್ಪು ನೀಡಲಾಗಿದೆ ಎಂದರು.