![](https://kannadadunia.com/wp-content/uploads/2023/01/Rape.jpg)
ಚೆನ್ನೈ: 4ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಮಿಳುನಡಿನ ತಿರುಚನಾಪಳ್ಳಿ ಖಾಸಗಿ ಶಾಲೆಯಲ್ಲಿ ನಡೆದಿದೆ.
ತಿರುಚನಾಪಳ್ಳಿಯ ಮಣಪ್ಪರೈನಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥೆ, ಆಕೆಯ ಪತಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಶಾಲೆಯ ಮುಖ್ಯಸ್ಥೆಯ ಪತಿಯೇ ಪ್ರಮುಖ ಆರೋಪಿಯಾಗಿದ್ದಾನೆ. ಸದ್ಯ ನಾಲ್ವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದ್ದು, ಇನ್ನೋರ್ವ ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಮೇಲೆ ಲೈಂಗಿಕ ಕಿರುಕುಳ ಪ್ರಕರನದ ಬೆನ್ನಲ್ಲೇ ಸಂತ್ರಸ್ತ ಬಾಲಕಿ ಕುಟುಂಬದವರು, ಸಂಬಂಧಿಕರು ಶಾಲೆಗೆ ಧಾವಿಸಿ ಶಾಲೆಯ ಕಿಟಕಿ ಗಾಜುಗಳನ್ನು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.