ಬೆಂಗಳೂರು : ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಕಾವೇರಿ 2.0 ಸಾಫ್ಟ್’ವೇರ್ ಹ್ಯಾಕ್ ಆಗಿದ್ದು, ಎಫ್ ಐ ಆರ್ ದಾಖಲಾಗಿದೆ.
ಆಸ್ತಿ ಖರೀದಿ, ಮಾರಾಟ ಸೇರಿ ವಿವಿಧ ಪ್ರಕ್ರಿಯೆಗಳಿಗೆ ಬಳಸುವ ಕಾವೇರಿ 2.0 ಸಾಫ್ಟ್ ವೇರ್ ನ್ನು ಅಪರಿಚಿತರು ಹ್ಯಾಕ್ ಮಾಡಿದ್ದಾರೆ. ಅಪರಿಚಿತರ ವಿರುದ್ಧ ಕೇಂದ್ರ ಸಿಇಎನ್ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಅಪರಿಚಿತರು ಕಾವೇರಿ 2.0 ಸಾಫ್ಟ್ ವೇರ್ ಹ್ಯಾಕ್ ಮಾಡಿ ವೆಬ್ ಸೈಟ್ ಗೆ ಪ್ರವೇಶಿಸಿ ಅದರಲ್ಲಿರುವ ಡೇಟಾಗಳನ್ನು ಕಳವು ಮಾಡಲು ನಕಲಿ ಖಾತೆ ತೆರೆದಿರುವುದು ಪತ್ತೆಯಾಗಿದೆ.
ಕಾವೇರಿ 2.0 ವೆಬ್ ಸೈಟ್ ನಲ್ಲಿ ಸರ್ವರ್ ಡೌನ್
ಕಾವೇರಿ 2.0 ವೆಬ್ ಸೈಟ್ ನಲ್ಲಿ ಇತ್ತೀಚೆಗೆ ಸರ್ವರ್ ಡೌನ್ ಆಗಿದ್ದು, ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತಗೊಂಡಿತ್ತು.ರಾಜ್ಯದಲ್ಲಿ ಪ್ರತಿದಿನ ಸರಾಸರಿ 7ರಿಂದ 8 ಸಾವಿರ ದಸ್ತಾವೇಜುಗಳು ನೋಂದಣಿಯಾಗುತ್ತಿತ್ತು. ಆದರೆ, ಶನಿವಾರದಿಂದ ಕಾವೇರಿ 2.0 ತಂತ್ರಾಂಶ ಸಮರ್ಪಕವಾಗಿ ಕಾರ್ಯನಿರ್ವಹಿ ಸದ ಕಾರಣ ದಸ್ತಾವೇಜುಗಳ ನೋಂದಣಿ ಸಂಪೂರ್ಣ ಇಳಿಕೆಯಾಗಿದೆ.