ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಅರ್ಧಶತಕ ಬಾರಿಸಿದ್ದು, 50 ಕ್ಷೇತ್ರಗಳಲ್ಲಿ ಭಾರಿ ಮುನ್ನಡೆ ಸಾಧಿಸಿದೆ.
ಆಪ್ ಸಂಸ್ಥಾಪಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮೂವರು ನಾಯಕರೂ ಹಿನ್ನಡೆಯಲ್ಲಿದ್ದಾರೆ.ಬಿಜೆಪಿ ಮ್ಯಾಜಿಕ್ ಸಂಖ್ಯೆಯನ್ನೂ ದಾಟಿ ಮುನ್ನಡೆ ಕಾಯ್ದುಕೊಂಡಿದೆ. ಮುಸ್ಲಿಂ ಪ್ರಾಬಲವಿರುವ ಕ್ಷೇತ್ರಗಳಲ್ಲಿಯೂ ಬಿಜೆಪಿ ಮುನ್ನಡೆಯಲ್ಲಿದೆ.