![](https://kannadadunia.com/wp-content/uploads/2025/02/delhi-1-1.jpg)
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಕೆಲವೇ ಹೊತ್ತಲ್ಲಿ ಹೊರಬೀಳಲಿದ್ದು, ಮತ ಎಣಿಕೆ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸಿದೆ.
ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹಿನ್ನಡೆಯಲ್ಲಿದ್ದರೆ, ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಪಕ್ಷಕ್ಕೆ ದೆಹಲಿ ಫಲಿತಾಂಶದಲ್ಲಿ ಬಿಗ್ ಶಾಕ್ ಎದುರಾಗಿದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯಾವುದೇ ಖಾತೆಯನ್ನೇ ತೆರೆದಿಲ್ಲ.
ಆರಂಭದಲ್ಲಿ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದೇವೇಂದ್ರ ಯಾದವ್ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ ಸದ್ಯದ ಮಾಹಿತಿ ಪ್ರಕಾರ ಆ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ.
ಸದ್ಯದ ಟ್ರೆಂಡ್ ಪ್ರಕಾರ ಆಮ್ ಆದ್ಮಿ ಪಕ್ಷ 28 ಕ್ಷೇತ್ರಗಳಲ್ಲಿ, ಬಿಜೆಪಿ 42 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.