ನವದೆಹಲಿ: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಕೆಲವೇ ಹೊತ್ತಲ್ಲಿ ಹೊರಬೀಳಲಿದ್ದು, ಬಿಜೆಪಿ ಭಾರಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿಯತ್ತ ದಾಪುಗಾಲಿಟ್ಟಿದೆ.
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಹಿನ್ನಡೆ ಕಾಯ್ದುಕೊಂಡಿದೆ. ಬಿಜೆಪಿ ಮುನ್ನಡೆ ಸಾಧಿಸಿದ್ದು, 27 ವರ್ಷಗಳ ಬಳಿಕ ಬಿಜೆಪಿ ದೆಹಲಿ ಗದ್ದುಗೆ ಏರಲು ಸಜ್ಜಾಗುತ್ತಿದೆ. ಆಮ್ ಆದ್ಮಿ ಪಕ್ಷ 27 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 45 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಮ್ಯಾಜಿಕ್ ಸಂಖ್ಯೆ ದಾಟಿ ಬಿಜೆಪಿ ಗೆಲುವಿನತ್ತ ಸಾಗಿದೆ.
ದೆಹಲಿಯಲ್ಲಿ ಬಿಜೆಪಿ ಗೆಲುವಿನತ್ತ ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 7 ಗಂಟೆಗೆ ದೆಹಲಿ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ.
ಪಕ್ಷದ ನಾಯಕರ ಜೊತೆ ಚರ್ಚೆ ನಡೆಸಲಿರುವ ಪ್ರಧಾನಿ ಮೋದಿ, ಬಳಿಕ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.