ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದು 15 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಬೈಕ್ ಸ್ಕಿಡ್ ಆಗಿ ರಸ್ತೆ ಮಧ್ಯೆ ಬೈಕ್ ಸವಾರ ಬಿದ್ದಿದ್ದ. ಆತನನ್ನು ತಪ್ಪಿಸಲು ಹೋಗಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ. 15 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.