ಬೆಂಗಳೂರು : ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿ ಗುಣಮುಖರಾಗಿ ಬೆಂಗಳೂರಿಗೆ ಆಗಮಿಸಿದ ನಟ ಶಿವರಾಜ್ ಕುಮಾರ್ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ನಟ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಇತ್ತೀಚೆಗೆ ಅಮೆರಿಕದಲ್ಲಿ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮುಗಿಸಿಕೊಂಡ ಬಂದ ಕನ್ನಡ ಖ್ಯಾತ ನಟ ಶಿವರಾಜ್ಕುಮಾರ್ ಅವರನ್ನು ಇಂದು ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಭೇಟಿಯಾಗಿ, ಅವರ ಆರೋಗ್ಯ ವಿಚಾರಿಸಿದೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.
ಬೆಂಗಳೂರಿನ ನಾಗವಾರದಲ್ಲಿರುವ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಶಿವಣ್ಣನ ಆರೋಗ್ಯ ವಿಚಾರಿಸಿದ್ದರು.