![](https://kannadadunia.com/wp-content/uploads/2024/06/fire-fireh.png)
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅವಘಡ ಸಂಭವಿಸಿದೆ. ಖಾಸಗಿ ಬಸ್ ನ ಟೈರ್ ಬ್ಲಾಸ್ಟ್ ಆಗಿ ರಸ್ತೆ ಮಧ್ಯೆಯೇ ಬಸ್ ಧಗಧಗನೆ ಹೊತ್ತಿ ಉರಿದಿದೆ.
ಮಂಡ್ಯ ಹೊರವಲಯದ ಸ್ಯಾಂಜೋ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಕಣ್ಣೂರಿನತ್ತ ತೆರಳುತ್ತಿದ್ದ ಬಸ್ ಟೈರ್ ಬ್ಲಾಸ್ಟ್ ಆಗುತ್ತಿದ್ದಂತೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬಸ್ ಚಾಲಕ ಎಲ್ಲಾ ಪ್ರಯಾಣಿಕರಿಗೆ ಕೆಳಗಿಳಿಯುವಂತೆ ಸೂಚಿಸಿದ್ದಾರೆ.
ಪ್ರಯಾಣಿಕರು ಕೆಳಗಿಳಿಯುತ್ತಿದಂತೆ ಕ್ಷಣಾರ್ಧದಲ್ಲಿ ಬಸ್ ಧಗಧಗನೆ ಹೊತ್ತಿ ಉರಿದಿದ್ದು, ಎಕ್ಸ್ ಪ್ರೆಸ್ ವೇನಲ್ಲಿಯೇ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.