![](https://kannadadunia.com/wp-content/uploads/2023/01/accident.1.38550.jpg)
ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್, ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಬಸ್ ಕೆಳಗೆ ಸಿಲುಕಿಕೊಂಡಿದ್ದಾನೆ. ಆತನನ್ನು ಹೊರ ತೆಗೆದು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ.
ಬೈಕ್ ನಲ್ಲಿದ್ದ ಇನ್ನೋರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಸಂಭವಿಸಿತ್ತು. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.