alex Certify BREAKING : ‘ಮುಡಾ’ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್ : ಸುಪ್ರೀಂಕೋರ್ಟ್’ ಗೆ ಮೇಲ್ಮನವಿ ಸಲ್ಲಿಸದಿರಲು ಸ್ನೇಹಮಯಿ ಕೃಷ್ಣ ನಿರ್ಧಾರ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಮುಡಾ’ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್ : ಸುಪ್ರೀಂಕೋರ್ಟ್’ ಗೆ ಮೇಲ್ಮನವಿ ಸಲ್ಲಿಸದಿರಲು ಸ್ನೇಹಮಯಿ ಕೃಷ್ಣ ನಿರ್ಧಾರ.!

ಬೆಂಗಳೂರು : ಮುಡಾ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹಿಂದೆ ಸೆರೆದಿದಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸ್ನೇಹಮಯಿ ಕೃಷ್ಣ ಎಲ್ಲಾ ಮಾದ್ಯಮ ಮಿತ್ರರಿಗೆ/ಹಿತೈಷಿಗಳಿಗೆ ನಮಸ್ಕಾರಗಳು, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನನಗೆ ತಾವೆಲ್ಲರೂ ಪ್ರಶ್ನೆ ಮಾಡುತ್ತಿದ್ದದ್ದು ಸರಿಯಷ್ಟೆ. ಮಾನ್ಯ ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ ಕಾಲ ಚಿಂತನೆ ನಡೆಸಿ, ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿ, ನನ್ನ ಕೆಲವು ಆತ್ಮೀಯ ವಕೀಲರೊಂದಿಗೆ-ಹಿತೈಷಿಗಳೊಂದಿಗೆ ಚರ್ಚೆ ನಡೆಸಿ, ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಒಂದು ನಿರ್ಧಾರಕ್ಕೆ ಬಂದಿರುತ್ತೇನೆ, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮತ್ತಷ್ಟು ಕಾಲ ವಿಳಂಬ ಮಾಡುವ ಬದಲು, ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸಹ, ನನ್ನ ಬಳಿ ಇರುವ ಮತ್ತು ಲಭ್ಯವಾಗುವ ಸಾಕ್ಷ್ಯಾಧಾರಗಳನ್ನು ಆಧರಿಸಿ, ಮಾನ್ಯ ನ್ಯಾಯಾಲಯದಲ್ಲಿ ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆರೋಪಿತರಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದ್ದರಿಂದ, ವಕೀಲರ ಪರೋಕ್ಷ ಸಹಕಾರ ಪಡೆದುಕೊಂಡು, ಅವಶ್ಯಕತೆ ಬಿದ್ದರೆ ವಕೀಲರನ್ನು ನೇಮಕ ಮಾಡಿಕೊಳ್ಳುವ ಹಕ್ಕನ್ನು ಉಳಿಸಿಕೊಂಡು, ಖುದ್ದಾಗಿ ನಾನೇ (party in person) ಮಾನ್ಯ ನ್ಯಾಯಾಲಯಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸಿ, ವಾದ ಮಂಡನೆ ಮಾಡಿ, ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ನಿರ್ಧರಿಸಿದ್ದೇನೆ – ಇತಿ ನಿಮ್ಮವ, ಸ್ನೇಹಮಯಿ ಕೃಷ್ಣ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...