![](https://kannadadunia.com/wp-content/uploads/2024/11/elephant.png)
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷವಾಗಿವೆ. ಏಕಾಏಕಿ 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಎನ್ ಆರ್ ಪುರ ತಾಲೂಕಿನ ವಿಠಲ ಗ್ರಾಮದಲ್ಲಿ ಪ್ರತ್ಯಕ್ಷವಾಗಿವೆ.
ಭದ್ರಾ ಹಿನ್ನೀರಿನ ಬಳಿ ಮರಿಯಾನೆಗಳೊಂದಿಗೆ ಕಾಡಾನೆಗಳ ಗುಂಪು ಬಂದಿದೆ. ಭದ್ರಾ ಹಿನ್ನೀರು ಪ್ರದೇಶದಲ್ಲಿಯೇ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಗ್ರಾಮಸ್ಥರಲ್ಲಿ, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಕಾಡಾನೆಗಳನ್ನು ಮತ್ತೆ ಕಾಡಿಗೆ ಕಳುಹಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.