ಬೆಂಗಳೂರು : ಬೆಂಗಳೂರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಛಿದ್ರ ಛಿದ್ರವಾಗಿದ್ದು, 38 ವರ್ಷದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್ ತಾಲೂಕಿನ ನೆರಳೂರಿನಲ್ಲಿ ಈ ಘಟನೆ ನಡೆದಿದೆ. ಬಿಹಾರ ಮೂಲದ ದಿನೇಶ್ ದಾಸ್ (38) ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬೆಳಗ್ಗೆ ಎದ್ದು ಲೈಟ್ ಆನ್ ಮಾಡಿದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ತಗಡಿನ ಛಾವಣಿ ಛಿದ್ರ ಛಿದ್ರವಾಗಿದೆ.ಟೋಟಲ್ ಕಂಪನಿಗೆ ಸೇರಿದ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಪೋಟವಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.