![](https://kannadadunia.com/wp-content/uploads/2025/02/theft-bike.jpg)
ಚಾಮರಾಜನಗರ: ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಚಮರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಾಮರಾಜನಗರ ಸಿಇಎನ್ ಠಾಣೆಯಲ್ಲಿ ಬೈಕ್ ಕಳ್ಳತನ ನಡೆದಿತ್ತು. ಪೊಲೀಸ್ ಠಾಣೆಯ ಗೇಟ್ ಬೀಗ ಮುರಿದು ಒಳ ನುಗ್ಗಿದ್ದ ಕಳ್ಳರು ಜಪ್ತಿ ಮಾಡಿ ಇಡಲಾಗಿದ್ದ ಬೈಕ್ ಕದ್ದು ಪರಾರಿಯಾಗಿದ್ದರು.
ಕಳ್ಳರ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ತನಿಖೆ ನಡೆಸಿದ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅರ್ಫಾಜ್ ಹಾಗೂ ಇಮ್ರಾನ್ ಬಂಧಿತ ಆರೋಪಿಗಳು.
ತಡರಾತ್ರಿ 2 ಗಂಟೆ ಸುಮಾರಿಗೆ ಪೊಲೀಸ್ ಠಾಣೆಗೆ ನುಗ್ಗಿದ್ದ ಕಳ್ಳರು ಎನ್ ಡಿ ಪಿಎಸ್ ಪ್ರಕರಣದಲ್ಲಿ ಜಪ್ತಿ ಮಾಡಿದ್ದ ಹೋಂಡಾ ಶೈನ್ ಬೈಕ್ ಕದ್ದು ಪರಾರಿಯಾಗಿದ್ದರು.