ವಿರೋಧ ಪಕ್ಷಗಳ ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಹಾಗೂ ಆಮ್ ಆದ್ಮ ಪಕ್ಷ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪರಸ್ಪರ ಹೋರಾಟ ನಡೆಸಿದ್ದು ಬಿಜೆಪಿ ಗೆಲುವಿಗೆ ಕಾರಣವಾಯಿತು ಎಂದು ಸೋಮವಾರ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಹೇಳಿದೆ.
ಬಿಜೆಪಿ ವಿರುದ್ಧ ಹೋರಾಡುವ ಬದಲು ಹೀಗೆ ಪರಸ್ಪರ ಕಾದಾಟ ಮುಂದುವರಿಸುವುದಾದರೆ ವಿರೋಧ ಪಕ್ಷಗಳ ಮೈತ್ರಿಕೂಟದ ಅಗತ್ಯವಿಲ್ಲ. ಎಂದು ಹೇಳಿದೆ. ಕಳೆದ ವಾರ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 48 ಸ್ಥಾನ ಗೆದ್ದಿರುವ ಬಿಜೆಪಿಯು ಭಾರಿ ಬಹುಮತ ಸಾಧಿಸಿದೆ. 22 ಕ್ಷೇತ್ರಗಳಲ್ಲಿ ಜಯ ಸಾಧಿಸಿರುವ ಎಎಪಿಯು ಅಧಿಕಾರದಿಂದ ಕೆಳಗಿಳಿದಿದೆ. ಅರವಿಂದ ಕೇಜಿವಾಲ್, ಮನೀಶ್ ಸಿಸೋಡಿಯಾ ಸೇರಿದಂತೆ ಪ್ರಮುಖ ನಾಯಕರು ಸೋಲು ಕಂಡಿರುವುದು ಎಎಪಿಗೆ ಆಘಾತ ನೀಡಿದೆ.
ಕಾಂಗ್ರೆಸ್ ಪಕ್ಷ ಸತತ ಮೂರನೇ ಬಾರಿಗೆ ಒಂದೂ ಸ್ಥಾನ ಗೆಲ್ಲದೆ ಮುಖಭಂಗ ಅನುಭವಿಸಿದೆ. ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಪಕ್ಷಗಳು ಪರಸ್ಪರರನ್ನು ನಾಶ ಮಾಡುವುದಕ್ಕಾಗಿಯೇ ಹೋರಾಟ ನಡೆಸಿದ್ದವು. ಇದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿ ಸುಲಭವಾಗಿ ಮುನ್ನಡೆ ಸಾಧಿಸಿದೆ ಎಂದು ಉದ್ಭವ್ ಠಾಕ್ರೆ ನೇತೃತ್ವದ ಶಿವಸೇನೆ ತನ್ನ ಮುಖವಾಣಿ ʼಸಾಮ್ನಾʼ ದ ಸಂಪಾದಕೀಯದಲ್ಲಿ ಹೇಳಿದೆ.