ಕೋಲಾರ: ಲಂಚಕ್ಕೆ ಕೈಯೊಡ್ಡಿದಾಗಲೇ ಕೋಲಾರ ಎಸಿ ಕಚೇರಿಯ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ಕೋಲಾರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಎಸಿ ಕಚೇರಿಯ ಕೇಸ್ ವರ್ಕರ್ ಕೋಮಲಾ ಲೋಕಾಯುಕ್ತ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಪೌತಿ ಖಾತೆ ಮಾಡಿಕೊಡಲು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 20 ಸಾವಿರ ರೂಪಾಯಿ ಲಂಚ ಪಡೆಯುವಾಗ ಕೋಮಲಾ ಸಿಕ್ಕಿ ಬಿದ್ದಿದ್ದಾರೆ. ಕೋಮಲಾ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೋಲಾರ ಲೋಕಾಯುಕ್ತ ಇನ್ಸ್ ಪೆಕ್ಟರ್ ರೇಣುಕಾ ನೇತೃತ್ವದಲ್ಲಿ ದಾಳಿ ನಡೆದಿದೆ.