ಮೈಸೂರು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಮೈಸೂರು ಜಿಲ್ಲೆಯ ತಿ.ನರಸೀಪುರ ತ್ರಿವೇಣಿ ಸಂಗಮದಲ್ಲಿ ಕುಂಭಮೇಳಕ್ಕೆ ಚಾಲನೆ ನೀಡಲಾಗಿದೆ.
ಕಾವೇರಿ, ಕಪಿಲಾ, ಗುಪ್ತಗಾಮಿನಿ ಸ್ಫಟಿಕ ನದಿಗಳ ಸಂಗಮ ಕ್ಷೇತ್ರದಲ್ಲಿ ಅಗಸ್ತ್ಯೇಶ್ವರ ದೇಗುಲದಲ್ಲಿ ಗಣಹೋಮ, ಪೂರ್ಣಾಹುತಿ, ಅಭಿಷೇಕ, ವಿಶೇಷ ಪೂಜೆ ಮೂಲಕ ಕುಂಭಮೇಳಕ್ಕೆ ಚಾಲನೆ ನೀಡಲಾಯಿತು.
ಸಾವಿರಾರು ಭಕ್ತರು ಮಾಘಮಾಸದ ಪುಣ್ಯಸ್ನಾನ ಮಾಡುವ ಮೂಲಕ ಪುನೀತರಾದರು. ಇಂದಿನಿಂದ ಮೂರು ದಿನಗಳ ಕಾಲ ತಿ.ನರಸೀಪುರ ತ್ರಿವೇಣಿ ಸಂಗಮದಲ್ಲಿ ಕುಂಭಮೇಲ ನಡೆಯಲಿದೆ.
ಆದಿಚುಂಚನಗಿರಿ ಮಠದ ಮೈಸೂರು ಶಾಖೆಯ ಸೋಮೇಶ್ವರನಾಥ ಸ್ವಾಮೀಜಿ, ಕಾಗಿನೆಲೆ ಶಿಖಾ ಮಠದ ಶಿವಾನಂದಪುರಿ ಸ್ವಾಮೀಜಿ, ಜಯೇಂದ್ರಪುರಿ ಸ್ವಾಮೀಜಿ, ತಿರುಚ್ಚಿಯ ತ್ರಿಬುದ್ಧ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.