ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕ್ಕೇರಿದ್ದು, ದೆಹಲಿ ಅಂಗಳ ತಲುಪಿದೆ. ಈ ಮಧ್ಯೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶಾಸಕ ಯತ್ನಾಳ್ ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, 72 ಗಂಟೆಗಳ ಒಳಗಾಗಿ ಉತ್ತರಿಸುವಂತೆ ಸೂಚಿಸಿದೆ. ನಿಗದಿತ ಕಾಲಮಿತಿಯೊಳಗೆ ಉತ್ತರಿಸದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.