ಬೆಂಗಳೂರು : ಬೆಂಗಳೂರು ಸಮೀಪ ಮತ್ತೊಂದು ವಿಮಾನ ನಿಲ್ದಾಣ ಸ್ಥಾಪನೆಗೆ ಸ್ಥಳ ಅಂತಿಮಗೊಳಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಬೆಂಗಳೂರು ಸಮೀಪ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಎರಡು ಸ್ಥಳಗಳನ್ನು ಅಂತಿಮಗೊಳಿಸಲಾಗಿದ್ದು, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಇದೇ ತಿಂಗಳು ಪ್ರಸ್ತಾವ ಸಲ್ಲಿಸಲಾಗುವುದು ಎಂದು ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ.ಪಾಟೀಲ್ ಅವರು ತಿಳಿಸಿದ್ದಾರೆ.