ಧಾರವಾಡ : 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಹನಿ ನೀರಾವರಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಶೇ. 90 ರಷ್ಟು ಸಹಾಯಧನವಿದ್ದು, ಆಸಕ್ತಿವುಳ್ಳ ರೈತರು ಸಹಾಯಧನ ಪಡೆಯಲು ಕೂಡಲೇ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಿ ಹನಿ ನೀರಾವರಿ ಸಹಾಯಧನ ಸೌಲಭ್ಯ ಪಡೆಯುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.