ಮೈಸೂರು : ಮೈಸೂರಿನ ಉದಯಗಿರಿಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳಿಗೆ ಗಾಯಗಳಾಗಿದೆ.
ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೋರ್ವ ಹಾಕಿದ ಒಂದು ಪೋಸ್ಟ್ ಭಾರಿ ಗಲಾಟೆಗೆ ಕಾರಣವಾಗಿದೆ. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ಮಾಜಿ ಸಿಎಂ ಗಳ ವ್ಯಂಗ್ಯಭರಿತ ಪೋಸ್ಟ್ ಹಾಕಲಾಗಿತ್ತು. ಅಲ್ಲದೇ ಧರ್ಮವೊಂದಕ್ಕೆ ಅವಮಾನವಾಗುವ ರೀತಿ ಪೋಸ್ಟ್ ಹಾಕಲಾಗಿತ್ತು.
ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ರೊಚ್ಚಿಗೆದ್ದ ಸಮದಾಯ ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಘೋಷಣೆ ಕೂಗಿ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಕೂಡ ಪ್ರತಿಯಾಗಿ ಲಾಠಿಚಾರ್ಜ್ ನಡೆಸಿ ಅಶ್ರುವಾಯು ಸಿಡಿಸಿದ್ದಾರೆ. ಕಲ್ಲು ತೂರಾಟದಲ್ಲಿ 14 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳಿಗೆ ಗಾಯಗಳಾಗಿದೆ.