ಬೆಂಗಳೂರು : ಮಂಡಿ ನೋವಿನಿಂದ ಬಳಲುತ್ತಿದ್ದ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದ್ದು, ಇಂದು ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇಷ್ಟು ದಿನ ಕಾವೇರಿ ನಿವಾಸದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಇಂದು ಹೊರಗಡೆ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಇಂದು ನಡೆಯುವ ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿನೋವಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ವೈದ್ಯರು ಸಿಎಂ ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿಗೆ ಸೂಚಿಸಿದ್ದಾರೆ.ಮಂಡಿ ನೋವು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದರು. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದರು. ಮಂಡಿಯ ಮೇಲೆ ಯಾವುದೇ ಭಾರ ಹಾಕದಂತೆ ನೋಡಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು.