ಉತ್ತರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಪಲ್ಟಿಯಾಗಿ 17 ಮಂದಿಗೆ ಗಾಯಗಳಾಗಿದೆ.
ಕೆಎಸ್ ಆರ್ ಟಿಸಿ ಬಸ್ ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿತ್ತು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಅಪಘಾತದಲ್ಲಿ 17 ಮಂದಿಗೆ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.