alex Certify BIG NEWS : ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಮಾ.8 ರಂದು ರಾಷ್ಟ್ರೀಯ ಲೋಕ ಅದಾಲತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಮಾ.8 ರಂದು ರಾಷ್ಟ್ರೀಯ ಲೋಕ ಅದಾಲತ್

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಮಾ.08 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ಮಾ.08 ರಂದು ನಡೆಯುವ ಮೆಗಾ-ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ. ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಂಡು ತಮ್ಮ ವಿವಾದಗಳನ್ನು ಅಂತ್ಯಗೊಳಿಸಬಹುದು ಎಂದು ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಲೋಕ್ ಅದಾಲತ್ ಅಂಗವಾಗಿ ಪ್ರತಿದಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲ್ಲಿ ಪೂರ್ವಭಾವಿ ಬೈಠಕ್ಗಳು ನಡೆಯುತ್ತಲಿವೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಅಥವಾ ದೂ.08392-278077 ಗೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...