ಬೆಂಗಳೂರು : ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ರೌಡಿಶೀಟರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.
ಭವಾನಿನಗರದಲ್ಲಿ ಗಾಂಜಾ ಮಾರುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮೊದಲು ಎ1 ಆರೋಪಿ ಯೂಸುಫ್ ಷರೀಪ್ ನನ್ನು ಬಂಧಿಸಿದ್ದಾರೆ. ನಂತರ ಈತ ನೀಡಿದ ಮಾಹಿತಿ ಮೇರೆಗೆ ಎ2 ಜಾಫರ್ ಸಾಧಿಕ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಲಕ್ಷಾಂತರ ಮೌಲ್ಯದ ಗಾಂಜಾ ಮತ್ತಿತರರ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದು, ಬಂಧಿತರ ವಿಚಾರಣೆ ನಡೆಯುತ್ತಿದೆ.