ಹಾವೇರಿ: ಜಮೀನು ಕೆಲಸಕ್ಕೆಂದು ಹೋಗಿದ್ದ ವೇಳೆ ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಮರಿಕೊಪ್ಪ ಗ್ರಾಮದಲ್ಲಿ ನಡೆದಿದೆ.
45 ವರ್ಷದ ರೇಣುಕಾ ಮೃತ ಮಹಿಳೆ. ಕೆಲಸಕ್ಕೆಂದು ಜಮೀನಿಗೆ ಹೋಗಿದ್ದ ವೇಳೆ ಮಹಿಳೆಗೆ ಹಾವು ಕಚ್ಚಿತ್ತು. ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಸಂಬಂಧಕರು ಮಾಹಿತಿ ನೀಡಿದ್ದಾರೆ.
ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.