![](https://kannadadunia.com/wp-content/uploads/2024/08/judge.jpg)
ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿ ದಾವಣಗೆರೆ ಕೋರ್ಟ್ ಆದೇಶ ಹೊರಡಿಸಿದೆ.
27 ವರ್ಷದ ಅಪರಾಧಿಗೆ ಕೋರ್ಟ್ 20 ವರ್ಷ ಜೈಲು ಶಿಕ್ಷೆ ಹಾಗೂ 38 ಸಾವಿರ ರೂಪಾಯಿ ದಂಡ ವಿಧಿಸಿದೆ. ಅಪರಾಧಿ, ಬಾಲಕಿ ಶಾಲೆಗೆ ಹೋಗುವಾಗ ಪರಿಚಯ ಮಾಡಿಕೊಂಡು, ಆತ್ಕೆಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದುಕೊಂಡು ಹೋಗುವುದು, ಬರುವುದು ಮಾಡುತ್ತಿದ್ದ. ಬಳಿಕ ಬಲಕಿಗೆ ಮದುವೆಯಾಗುವುದಾಗಿ ಕೇಳಿದ್ದ. ಇದಕ್ಕೆ ಬಾಲಕಿ ನಿರಾಕರಿಸಿದಾಗ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಕೆಲ ತಿಂಗಳ ಬಳಿಕ ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು ಪೋಷಕರು ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಗರ್ಭಿಣಿ ಎಂಬುದು ಗೊತ್ತಾಗಿದೆ. ವಿಚಾರಿಸಿದಾಗ ಆಟೋ ಚಾಲಕ ಹೆದರಿಸಿ ಬೆದರಿಸಿ ಕೃತ್ಯವೆಸಗಿದ್ದಾನೆ ಎಂಬುದು ಗೊತ್ತಾಗಿದೆ. ಹರಿಹರ ಠಾಣೆಯಲ್ಲಿ ಪೋಷಕರು ಪ್ರಕರಣ ದಾಖಲಿಸಿದ್ದರು. ಪೊಕ್ಸೋ ಕೇಸಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ ಪೊಲೀಸರು ತನಿಖೆ ನಡೆಸಿದ್ದ ವೇಳೆ ಆರೋಪಿ ಕೃತ್ಯ ಸಾಬೀತಾಗಿದೆ.
ಈ ಹಿನ್ನೆಲೆಯಲ್ಲಿ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ. ಶ್ರೀರಾಮ ನಾರಾಯಣ ಹೆಗಡೆ, ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಸಂತ್ರಸ್ತೆಗೆ ಸರ್ಕಾರದಿಂದ 5 ಲಕ್ಷ ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ.