![](https://kannadadunia.com/wp-content/uploads/2023/01/accident.1.38550.jpg)
ಸರ್ಕಾರಿ ಬಸ್ ನ ಪಾಟಾ ಕಟ್ ಆಗಿ ಚಾಲಕ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಹೊಲಕ್ಕೆ ನುಗ್ಗಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.
ಚಲಿಸುದ್ದ ಬಸ್ ನ ಪಾಟಾ ಏಕಾಏಕಿ ಕಟ್ ಆಗಿದೆ. ನಿಯಂತ್ರಣ ಕಳೆದುಕೊಂಡ ಬಸ್ ಗದ್ದೆಗೆ ನುಗ್ಗಿದೆ. ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಬಸ್ ನಲ್ಲಿದ್ದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ.
ಬಸ್ ನಲ್ಲಿ ಸುಮಾರು 60 ಪ್ರಯಾಣಿಕರಿದ್ದರು. ಎಲ್ಲರೂ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.