ತುಮಕೂರು : ತುಮಕೂರಿನ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಲಕ್ಕನಹಳ್ಳಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಇಂದು ಬೆಳಗ್ಗೆ ಮಕ್ಕಳಿಗೆ ತಿಂಡಿ ಕೊಡಲಾಗಿತ್ತು, ತಿಂಡಿ ಸೇವಿಸಿದ ಬಳಿಕ ಫುಡ್ ಪಾಯ್ಸಸ್ ಆಗಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಶಂಕೆ ವ್ಯಕ್ತವಾಗಿದೆ.
ಲಕ್ಕನಹಳ್ಳಿಯ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಈ ಘಟನೆ ನಡೆದಿದ್ದು, ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಾ ತಾಲೂಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.