![](https://kannadadunia.com/wp-content/uploads/2025/02/muda-scam-siddaramaiah.jpg)
ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಎಸ್ ಪಿ ಉದೇಶ್, ಹಿರಿಯ ಅಧಿಕಾರಿಗಳಿಗೆ ತನಿಖೆಯ ಅಂತಿಮ ವರದಿ ಸಿಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿದ್ದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದೆ. ತನಿಖಾಧಿಕಾರಿಯೂ ಆಗಿರುವ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್, ಇಂದು ಐಜಿಪಿ ಸುಬ್ರಹ್ಮಣ್ಯೇಶ್ವರ್ ರಾವ್ ಅವರಿಗೆ ತನಿಖೆಯ ಅಂತಿಮ ವರದಿ ಸಲ್ಲಿಸಿದ್ದಾರೆ.
ಅಂತಿಮ ವರದಿ ಪರಿಶೀಲನೆ ಬಳಿಕ, ಅಧಿಕಾರಿಗಳು ಕೋರ್ಟ್ ಗೆ ವರದಿ ಸಲ್ಲಿಸಲಿದ್ದಾರೆ. ವರದಿ ಪರಿಶೀಲನೆ ಬಳಿಕ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ತೀರ್ಪು ಪ್ರಕಟಿಸಲಿದ್ದು, ತೀವ್ರ ಕುತೂಹಲ ಮೂಡಿಸಿದೆ.