![](https://kannadadunia.com/wp-content/uploads/2021/06/rajanna.jpg)
ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ತೀವ್ರ ಪೈಪೋಟಿ ಆರಂಭವಾಗಿದೆ. ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕೂಡ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಾಧ್ಯತೆ ಬಗ್ಗೆಸುಳಿವು ನೀಡಿದ್ದಾರೆ/ ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಸಹಕಾರ ಸಚಿವ ಕೆ.ಎನ್.ರಾಜಣ್ಣ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ.
ದೆಹಲಿ ಪ್ರವಾಸ ಕೈಗೊಂಡಿರುವ ಸಚಿವ ಕೆ.ಎನ್.ರಾಜಣ್ಣ, ನವದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಶಾನದ ಬಗ್ಗೆಯೂ ಚರ್ಚೆ ನಡೆಸಿದಾರೆ ಎಂದು ಹೇಳಲಾಗುತ್ತಿದೆ.
ಆರಂಭದಿಂದಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿರುವ ಸಚಿವ ರಾಜಣ್ಣ, ಆಗಾಗ ಬಹಿರಂಗವಾಗಿ ಹೇಳಿಕೆ ನೀಡುತ್ತಲೇ ಇದ್ದರು. ಇದೀಗ ದಿಡೀರ್ ದೆಹಲಿ ಪ್ರವಾಸ ಕೈಗೊಂಡಿರುವ ರಾಜಣ್ಣ, ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.