ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಟೇಬಲ್ ಟೆನಿಸ್ ಆಟಗಾರ್ತಿ ಮನಿಕಾ ಬಾತ್ರಾ ಅವರ ತಂದೆ ಗಿರೀಶ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮನಿಕಾ ಅವರ ತಂದೆ ಮಂಗಳವಾರ ದೆಹಲಿಯಲ್ಲಿ ಕೊನೆಯುಸಿರೆಳೆದಿದ್ದು ಅವರ ಅಂತ್ಯಕ್ರಿಯೆಯನ್ನು ಅದೇ ದಿನ ಇಂದರ್‌ಪುರಿಯಲ್ಲಿ ನೆರವೇರಿಸಲಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರಿ ಗುರುವಾರ ಪ್ರಾರ್ಥನಾ ಸಭೆ ನಡೆಯಲಿದೆ.
29 ವರ್ಷದ ಮನಿಕಾ ಭಾರತದ ಅಗ್ರ ಮಹಿಳಾ ಸಿಂಗಲ್ಸ್ ಆಟಗಾರ್ತಿಯಾಗಿದ್ದಾರೆ. ಅವರು 2018 ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಹಿಳಾ ಸಿಂಗಲ್ಸ್ ಮತ್ತು ಮಹಿಳಾ ತಂಡ ವಿಭಾಗದಲ್ಲಿ ತಲಾ ಒಂದು ಚಿನ್ನದ ಪದಕವನ್ನು ಗೆದ್ದರು. ಅದೇ ಸಿಡಬ್ಲ್ಯುಜಿಯಲ್ಲಿ ಅವರು ಮಹಿಳಾ ಡಬಲ್ಸ್‌ನಲ್ಲಿ ಬೆಳ್ಳಿ ಮತ್ತು ಮಿಶ್ರ ಡಬಲ್ಸ್‌ನಲ್ಲಿ ಕಂಚಿನ ಪದಕವನ್ನು ಸಹ ಗೆದ್ದರು.
2018 ರ ಜಕಾರ್ತಾ ಏಷ್ಯನ್ ಗೇಮ್ಸ್‌ನಲ್ಲಿ ಅವರು ಮಿಶ್ರ ಡಬಲ್ಸ್‌ನಲ್ಲಿ ಕಂಚಿನ ಪದಕವನ್ನು ಗೆದ್ದರು.