![](https://kannadadunia.com/wp-content/uploads/2022/12/bjp-1-1024x576-1.jpg)
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟುವುದಾಗಿ ಹೇಳಿಕೆ ನೀಡಿದ್ದ ರಾಜ್ಯ ಸರ್ಕಾರ, ಯಾವುದೇ ಕ್ರಮಕ್ಕೆ ಮುಂದಾಗದೇ ಕಾಲ ಕಳೆಯುತ್ತಿದೆ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.
ಮೈಕ್ರೋ ಫೈನಾನ್ಸ್‌ಗಳ ಭಂಡಾಟಕ್ಕೆ ಕಾಂಗ್ರೆಸ್ ಸರ್ಕಾರ ಮೂಗುದಾರ ಹಾಕುತ್ತಿಲ್ಲ. ಮೈಕ್ರೋ ಫೈನಾನ್ಸ್‌ಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದರೂ ಭ್ರಷ್ಟ ಕಾಂಗ್ರೆಸ್ ಸರ್ಕಾರ ಮಾತ್ರ ಹೇಳಿಕೆಗಳಲ್ಲಿಯೇ ದಿನ ದೂಡುತ್ತಿದೆ ಎಂದು ಕಿಡಿಕಾರಿದೆ.
ಮನೆ ಜಪ್ತಿಯಂತಹ ಹೀನ ಕೃತ್ಯಗಳನ್ನು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ನಡೆಸುತ್ತಿದ್ದರೂ ಸರ್ಕಾರ ಮಾತ್ರ ಮೌನಕ್ಕೆ ಶರಣಾಗಿರುವುದು ಅಸಹಾಯಕತೆಯೋ ಅಥವಾ ಜಾಣಕುರುಡೋ ಎಂಬುದು ತಿಳಿಯುತ್ತಿಲ್ಲ ಎಂದು ಗುಡುಗಿದೆ.