ಬೆಂಗಳೂರು : ಅಪಾರ್ಟ್ ಮೆಂಟ್ ನಿಂದ ಜಿಗಿದು 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
15 ವರ್ಷದ ಬಾಲಕಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದ ಬಾಲಕಿ 20 ನೇ ಮಹಡಿಯಿಂದ ಜಿಗಿದಿದ್ದು, ಈಕೆ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು.ಮಧ್ಯಪ್ರದೇಶದ ಮೂಲದ ಕುಟುಂಬ ಬೆಂಗಳೂರಿನ ಸೆಟ್ಸ್ ಮಾರ್ಕ್ ಅಪಾರ್ಟ್ ಮೆಂಟ್ ನಲ್ಲಿ ನೆಲೆಸಿತ್ತು. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.