![](https://kannadadunia.com/wp-content/uploads/2022/09/suicide.jpeg)
ಮಡಿಕೇರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಫೈನಾನ್ಸ್ ನವರ ಕಿರುಕುಳಕ್ಕೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ.
ಮೈಕ್ರೋ ಫೈನಾನ್ಸ್ ನವರ ಕಿರುಕುಳಕ್ಕೆ ನೊಂದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಶನಿವಾರ ಸಂತೆ ಗ್ರಾಮದಲ್ಲಿ ನಡೆದಿದೆ.
ಹಸೀನಾ (42) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಹಸೀನಾ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದುಕೊಂಡಿದ್ದರು. ಫೈನಾನ್ಸ್ ಸಿಬ್ಬಂದಿ ಹಸೀನಾ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದರು ಎಂದು ಕುಟುಬದವರು ಆರೋಪಿಸಿದ್ದಾರೆ. ಇದೀಗ ಹಸೀನಾ ನೇಣಿಗೆ ಕೊರಳೊಡ್ಡಿದ್ದಾರೆ.
ಶನಿವಾರ ಸಂತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.