![](https://kannadadunia.com/wp-content/uploads/2022/06/thaawarchandgehlot-162555566.jpg)
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಮೈಕ್ರೋ ಫೈನಾನ್ಸ್ ತೊಂದರೆಗಳಿಗೆ ಬ್ರೇಕ್ ಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಮುಂದಾಗಿದ್ದ ಸುಗ್ರೀವಾಜ್ಞೆಯನ್ನು ಕೆಲದಿನಗಳ ಹಿಂದೆ ವಾಪಾಸ್ ಕಳುಹಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೆಲ ಸ್ಪಷ್ಟನೆಯನ್ನು ಕೇಳಿದ್ದರು. ಬಳಿಕ ಸುಗ್ರೀವಾಜ್ಞೆ ಪುರಸ್ಕರಿಸುವಂತೆ ಕರಡು ಪ್ರತಿಯನ್ನು ಸರ್ಕಾರ ಮರು ಸಲ್ಲಿಕೆ ಮಾಡಿತ್ತು. ಅಲ್ಲದೇ ಸುಗ್ರೀವಾಜ್ಞೆ ಜಾರಿಗೆ ತರುವ ಅತಿಅಗತ್ಯತೆ ಬಗ್ಗೆ ಮನವರಿಕೆ ಮಾಡಿತ್ತು. ಇದೀಗ ರಾಜ್ಯಪಾಲರು ಸುಗ್ರೀವಾಜ್ಞೆ ಜಾರಿಗೆ ಸಹಿ ಹಾಕಿದ್ದಾರೆ.
ರಾಜ್ಯಪಾಲರ ಅಂಕಿತದ ಬೆನ್ನಲ್ಲೇ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್, ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬ್ರೇಕ್ ಬೀಳಲಿದೆ. ಶೀಘ್ರದಲ್ಲಿಯೇ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯನ್ನು ಜಾರಿಗೆ ತರಲಿದೆ.