![](https://kannadadunia.com/wp-content/uploads/2025/01/firing.png)
ವಿಜಯಪುರ: ಸತೀಶ್ ರಾಥೋಡ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಮೇಲೆ ಫೈರಿಂಗ್ ನಡೆಸಿದ್ದಾರೆ.
ಆರೋಪಿ ಸುರೇಶ್ ರಾಥೋಡ್ ಕಾಲಿಗೆ ಗುಂಡೇಟು ಹೊಡೆದು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಹೊರವಲಯದ ಅಥಣಿ ರಸ್ತೆಯಲ್ಲಿ ನಡೆದಿದೆ.
ಜನವರಿ 28ರಂದು ಅರಕೇರಿ ಎಲ್ ಟಿ 1ರ ಮಾನವರದೊಡ್ಡಿ ಬಳಿ ಸತೀಶ್ ರಾಥೋಡ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.