![](https://kannadadunia.com/wp-content/uploads/2022/12/bjp-1-1024x576-1.jpg)
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಮುಖ್ಯಮಂತ್ರಿ ಹುದ್ದೆಗೆ ಮಹಿಳಾ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. 27 ವರ್ಷಗಳ ನಂತರ ದೆಹಲಿಯಲ್ಲಿ 70 ಸದಸ್ಯರ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರಕ್ಕೆ ಮರಳಿದ್ದು, ಈಗ ನಂತರ ಬಿಜೆಪಿಯ ಮುಖ್ಯಮಂತ್ರಿ ಆಯ್ಕೆ ಕುರಿತು ಕುತೂಹಲ ತೀವ್ರಗೊಂಡಿದೆ.
ಮುಖ್ಯಮಂತ್ರಿ ಆಯ್ಕೆಯ ವಿಷಯಕ್ಕೆ ಬಂದಾಗ ಇತ್ತೀಚೆಗೆ ಬೇರೆ ರಾಜ್ಯಗಳಲ್ಲಿ ಅಚ್ಚರಿಯ ಹೆಸರುಗಳನ್ನು ಘೋಷಿಸಿರುವ ಬಿಜೆಪಿ ದೆಹಲಿಯಲ್ಲೂ ಇದೇ ಪ್ರಯೋಗಕ್ಕೆ ಮುಂದಾಗುವ ಸಾಧ್ಯತೆಯಿದೆ. ಹರಿಯಾಣ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಅಚ್ಚರಿಯ ಅಭ್ಯರ್ಥಿಗಳನ್ನು ಸಿಎಂ ಸ್ಥಾನಕ್ಕೆ ಘೋಷಿಸಲಾಗಿತ್ತು.
ಮೂಲಗಳು ಹೇಳುವಂತೆ, ಬಿಜೆಪಿಯ ಪಟ್ಟಿಯಲ್ಲಿರುವ ಹೆಸರುಗಳಲ್ಲಿ ದೆಹಲಿಯ ಮೊದಲ ಮುಖ್ಯಮಂತ್ರಿ ಮತ್ತು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಕೂಡ ಒಬ್ಬರು. ಹಾಗೇ, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಲ್ವರು ಮಹಿಳಾ ಅಭ್ಯರ್ಥಿಗಳು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದ ಪ್ರಾಬಲ್ಯವನ್ನು ಕೊನೆಗೊಳಿಸಿದ ನಿರ್ಣಾಯಕ ಚುನಾವಣೆಯಲ್ಲಿ ರೇಖಾ ಗುಪ್ತಾ, ಶಿಖಾ ರಾಯ್, ಪೂನಂ ಶರ್ಮಾ ಮತ್ತು ನೀಲಂ ಪಹೇಲ್ವಾನ್ ಜಯ ಗಳಿಸಿದ್ದಾರೆ.
ಹೀಗಾಗಿ, ಈ ನಾಲ್ವರಲ್ಲಿ ಒಬ್ಬರು ಮಹಿಳೆ ಸಿಎಂ ಆಗುವ ಸಾಧ್ಯತೆಗಳನ್ನೂ ತಳ್ಳಿ ಹಾಕುವಂತಿಲ್ಲ. ಹಾಗೇ, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಕೂಡ ಈ ಪಟ್ಟಿಯಲ್ಲಿದೆ ಎನ್ನಲಾಗುತ್ತಿದೆ.