HomeKarnatakaBREAKING NEWS: ಮಹಿಳೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ

BREAKING NEWS: ಮಹಿಳೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ

ಹಾಸನ: ಮಹಿಳೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ರೈಲು ನಿಲ್ದಾಣ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.

40 ವರ್ಷ ಆಸುಪಾಸಿನ ಅಪರಿಚಿತ ಮಹಿಳೆ ಶವವಾಗಿ ಪತ್ತೆಯಾಗಿದ್ದು, ಮಹಿಳೆಯ ಗುರುತು ಸಿಗಬಾರದು ಎಂಬಂತೆ ಆಕೆಯ ಮುಖವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸಕ್ಕೆ ಹೋಗಿದ್ದಾಗ ಮಹಿಳೆ ಕೊಲೆಯಾಗಿರುವ ರೀತಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಹಾಸನ ನಗರ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular