alex Certify BIG NEWS : ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ, ಪೋಷಕರಿಗೆ ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ, ಪೋಷಕರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶ ಅರ್ಜಿ ಸ್ವೀಕಾರ ಆರಂಭವಾಗಿದೆ.

ಆದರ್ಶ ವಿದ್ಯಾಲಯದಲ್ಲಿ 2025-26ನೇ ಸಾಲಿನ ಪ್ರವೇಶ ಪರೀಕ್ಷೆಗೆ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ 14ನೇ ಫೆಬ್ರವರಿ 2025 ರಿಂದ ಪ್ರಾರಂಭವಾಗಲಿದೆ. ಆಸಕ್ತ ವಿದ್ಯಾರ್ಥಿಗಳು 28-02-2025 ಸಮಯದೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಸಾಮಾನ್ಯ ಸೂಚನೆಗಳು 

1. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಅಭ್ಯರ್ಥಿಗಳು ಜಾಹಿರಾತು, ಸೂಚನೆಗಳನ್ನು ಅರ್ಥೈಸಿಕೊಂಡು ಅರ್ಹ ಮಾನದಂಡಗಳು ತೃಪ್ತಿಕರವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು.

2. 5ನೇ ತರಗತಿ ಓದುತ್ತಿರುವ ಕರ್ನಾಟಕ ರಾಜ್ಯದ ನಿವಾಸಿ ವಿದ್ಯಾರ್ಥಿಗಳಿಗೆ ಮಾತ್ರ ಈ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದು, ಇತರೆ ರಾಜ್ಯಗಳಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾದ ಅರ್ಹತೆ ಹೊಂದಿರುವುದು ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

3. ಆದರ್ಶ ವಿದ್ಯಾಲಯಗಳಿರುವ ಬ್ಲಾಕ್ಗಳಲ್ಲಿ ವಾಸಿಸುವ ಅಥವಾ ಅಧ್ಯಯನ ಮಾಡುವ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಆದರೆ ಅಭ್ಯರ್ಥಿಗಳು ಬೇರೆ ಬ್ಲಾಕ್ಗಳಲ್ಲಿ ವಾಸಿಸುತ್ತಿದ್ದಲ್ಲಿ ಅಥವಾ ಅಧ್ಯಯನ ಮಾಡುತ್ತಿದ್ದಲ್ಲಿ ಅಧಿಸೂಚನೆಯನ್ವಯ ತಿಳಿಸಿದ ಅಗತ್ಯ ದಾಖಲೆಗಳನ್ನು ಒದಗಿಸಬೇಕು.

4. ಕರ್ನಾಟಕ ರಾಜ್ಯಕ್ಕೆ ಸೇರಿದ ಅಭ್ಯರ್ಥಿಯು ಯಾವುದಾದರು ಒಂದು ಶಾಲೆಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳತಕ್ಕದ್ದು.

5. ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಯ ಪೋಷಕರು ತಮ್ಮ ಸ್ವಂತ ಮೊಬೈಲ್ ಸಂಖ್ಯೆಯನ್ನು ನೀಡತಕ್ಕದ್ದು. ಕೆಲವು ಮಾಹಿತಿ/ಸೂಚನೆಗಳನ್ನು ಕಳುಹಿಸಿಕೊಡಲಾಗುವುದು.

6. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಯು ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆಯನ್ನು ತರತಕ್ಕದ್ದು. ಒಂದು ವೇಳೆ ಯಾವುದೇ ವಿದ್ಯಾರ್ಥಿಯು SATS ಸಂಖ್ಯೆಯನ್ನು ಹೊಂದಿಲ್ಲದಿದ್ದಲ್ಲಿ ತಮ್ಮ ಶಾಲೆಯ ಮುಖ್ಯಸ್ಮರನ್ನು ಭೇಟಿಮಾಡಿ ತಮ್ಮ SATS ಸಂಖ್ಯೆಯನ್ನು ಪಡೆದ ನಂತರವೇ ಅರ್ಜಿ ಸಲ್ಲಿಸುವುದು. ಈ ಕೆಳಗೆ ಸೂಚಿಸುರುವ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಲು ಸಿದ್ಧಪಡಿಸಿಕೊಂಡಿರುವುದು.
ಈ ಎಲ್ಲಾ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಆನ್ ಲೈನ್ ನಲ್ಲಿ ಅಪ್ ಲೋಡ್ ಮಾಡುವುದು. ಎಲ್ಲಾ ದಾಖಲೆಗಳು jpg,jpeg ಮತ್ತು 300kb ಗಾತ್ರದಲ್ಲಿ ಸಿದ್ಧಪಡಿಸಿರಬೇಕು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...